Загрузка...

ರಾಜ್ಯ ಸರ್ಕಾರದಿಂದ ಸಾಧನಾ ಸಮಾವೇಶ | ಸಮಾವೇಶಕ್ಕೆ ಮುಂದಾಗಿರುವುದು ವಿಪರ್ಯಾಸ

ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಶೂನ್ಯ ಸಾಧನೆ ಮಾಡದಿದ್ದರೂ ಸಾಧನಾ ಸಮಾವೇಶ ಮಾಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದ ಅಭಿವೃದ್ಧಿ ಇಲ್ಲದಿದ್ದರೂ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಮಾಡುತ್ತಿರುವುದು ಕಾಂಗ್ರೆಸ್ ನಾಯಕರ ನಡವಳಿಕೆ ಅನುಮಾನ ಮೂಡಿಸುವಂತಿದೆ ಎಂದು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಹಾಸನದಲ್ಲಿ ನಡೆಯಬೇಕಾಗಿದ್ದ ಸ್ವಾಭಿಮಾನಿ ಸಮಾವೇಶವನ್ನು ಹೈಕಮಾಂಡ್ ಪ್ರಭಾವ ಬಳಸಿ ಜನಕಲ್ಯಾಣ ಸಮಾವೇಶವೆಂದು ಮರು ನಾಮಕರಣ ಮಾಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸಪೇಟೆಯಲ್ಲಿ ಸಾಧನಾ ಸಮಾವೇಶಕ್ಕೆ ಉತ್ಸಾಹ ತೋರುತ್ತಿದ್ದಾರೆ. ಈ ಸಮಾವೇಶ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೀಳ್ಕೊಡುಗೆ ಸಮಾರಂಭದಂತೆ ಕಾಣುತ್ತಿದೆ ಎಂದು ಹೇಳಿದ್ದ್ದಾರೆ.

#LiveDDChandanaNews #DDChandanaNews #DDChandana #DDKannada

Видео ರಾಜ್ಯ ಸರ್ಕಾರದಿಂದ ಸಾಧನಾ ಸಮಾವೇಶ | ಸಮಾವೇಶಕ್ಕೆ ಮುಂದಾಗಿರುವುದು ವಿಪರ್ಯಾಸ канала DD Chandana News
Страницу в закладки Мои закладки
Все заметки Новая заметка Страницу в заметки